ನವದೆಹಲಿ: ಕಳೆದ 24 ಗಂಟೆಗಳಲ್ಲಿ 913 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,30,27,784 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸೋಮವಾರ (ಏ.4)ದಂದು ದೇಶದಲ್ಲಿ 715 ದಿನಗಳ ನಂತರ ಸಾವಿರಕ್ಕಿಂತ ಕಡಿಮೆ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಸಾವಿನ ಪ್ರಮಾಣವು ಶೇ.1.21 ರಷ್ಟಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 13 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,21,358ಕ್ಕೆ ಏರಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.76 ರಷ್ಟಿದೆ. 1,316 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,24,95,089 ಮಂದಿ ಗುಣಮುಖರಾಗಿದ್ದಾರೆ.