ನವದೆಹಲಿ: ಕಳೆದ 24 ಗಂಟೆಗಳಲ್ಲಿ 795 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,30,29,839ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಸಾವಿನ ಪ್ರಮಾಣ ಶೇ.1.21 ರಷ್ಟಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 58 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,21,416 ಕ್ಕೆ ಏರಿದೆ.
ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.76 ರಷ್ಟಿದೆ. 1,208 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,24,96,369 ಮಂದಿ ಗುಣಮುಖರಾಗಿದ್ದಾರೆ. ದೈನಂದಿನ ಪಾಸಿಟಿವ್ ದರ ಶೇ.0.17ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವ್ ದರ ಶೇ. 0.22 ದಾಖಲಾಗಿದೆ. 12,054 ಸಕ್ರಿಯ ಪ್ರಕರಣಗಳಿವೆ.