ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,157 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಪ್ರಕರಣಗಳ ಸಂಖ್ಯೆ 4,30,82,345ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 19,500 ಇದೆ. ಕಳೆದ 24 ಗಂಟೆಯಲ್ಲಿ 26 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,23,869ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಚೇತರಿಕೆ ಪ್ರಮಾಣ ಶೇ. 98.74 ರಷ್ಟಿದೆ. ನಿನ್ನೆ 2,723 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ವರೆಗೆ 4,25,38,976 ಮಂದಿ ಗುಣಮುಖರಾಗಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇಕಡಾ 0.71 ರಿಂದ (ಭಾನುವಾರ) ಶೇಕಡಾ 1.07 ಕ್ಕೆ (ಸೋಮವಾರ) ಏರಿಕೆಯಾಗಿದೆೆ. ಸಾಪ್ತಾಹಿಕ ಪಾಸಿಟಿವಿಟಿ ದರ ದರ ಶೇ.0.68 ರಿಂದ (ಭಾನುವಾರ) ಶೇ.0.70 ಕ್ಕೆ (ಸೋಮವಾರ) ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,95,588 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟು ಪರೀಕ್ಷೆಗಳ ಸಂಖ್ಯೆ 83.82 ಕೋಟಿಗೆ ಏರಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿ ನಿರ್ವಹಿಸಲಾದ ಒಟ್ಟು ಲಸಿಕೆಯ ಡೋಸ್ಗಳ ಸಂಖ್ಯೆ 189.17 ಕೋಟಿ ಆಗಿದೆ.