ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,568 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಒಟ್ಟು ಪ್ರಕರಣಗಳ ಸಂಖ್ಯೆ 4,30,84,913ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 19,500 ಇದೆ. ಕಳೆದ 24 ಗಂಟೆಯಲ್ಲಿ 20 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,23,889ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ 2,568 ಹೊಸ ಕೋವಿಡ್ ಪ್ರಕರಣ ಪತ್ತೆ, 20 ಮಂದಿ ಸಾವು - ಭಾರತದ ಕೋವಿಡ್ ವರದಿ
ದೇಶದಲ್ಲಿ ಕಳೆದೊಂದು ದಿನದಲ್ಲಿ ಪತ್ತೆಯಾದ ಕೋವಿಡ್ ಪ್ರಕರಣಗಳ ವಿವರ ಇಲ್ಲಿದೆ.
ಸಾಂದರ್ಭಿಕ ಚಿತ್ರ
ದೇಶದಲ್ಲಿ 19,137 ಸಕ್ರಿಯ ಪ್ರಕರಣಗಳಿದ್ದು, ಚೇತರಿಕೆ ಪ್ರಮಾಣ ಶೇ. 98.74 ರಷ್ಟಿದೆ. ನಿನ್ನೆ 2,911 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ವರೆಗೆ 4,25,41,887 ಮಂದಿ ಗುಣಮುಖರಾಗಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇಕಡಾ 1.07 ಹಾಗೂ ಸಾಪ್ತಾಹಿಕ ಪಾಸಿಟಿವಿಟಿ ದರ ದರ ಶೇ.0.70ರಷ್ಟಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿ ನಿರ್ವಹಿಸಲಾದ ಒಟ್ಟು ಲಸಿಕೆಯ ಡೋಸ್ಗಳ ಸಂಖ್ಯೆ 189.41 ಕೋಟಿ ಆಗಿದೆ.