ಕರ್ನಾಟಕ

karnataka

ETV Bharat / bharat

ಭಾರತದಲ್ಲಿ 2,897 ಹೊಸ ಕೋವಿಡ್ ಕೇಸ್​​ ಪತ್ತೆ, 54 ಮಂದಿ ಸಾವು - India corona cases

ದೇಶದ ಕೋವಿಡ್‌ ವರದಿ ಇಲ್ಲಿದೆ..

COVID
COVID

By

Published : May 11, 2022, 11:18 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,897 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,31,10,586ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಳೆದೊಂದು ದಿನದಲ್ಲಿ ದೇಶಾದ್ಯಂತ 54 ಜನರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,24,157 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶಾದ್ಯಂತ 19,494 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಚೇತರಿಕೆ ದರ ಶೇ. 98.74 % ರಷ್ಟಿದೆ.

ಕಳೆದೊಂದು ದಿನದಲ್ಲಿ 2,986 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 4,25,66,935 ಜನರು ಚೇತರಿಸಿಕೊಂಡಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 0.61% ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ದರ ಶೇ.0.74% ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನಡಿ ಈವರೆಗೆ 190.67 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಮಂಗಳವಾರ 14,83,878 ಮಂದಿಗೆ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ:ಸ್ಥಿರತೆ ಕಾಯ್ದುಕೊಂಡ ಇಂಧನ: ದೇಶ, ರಾಜ್ಯದ ಇಂದಿನ ತೈಲ ಬೆಲೆ ಮಾಹಿತಿ

ABOUT THE AUTHOR

...view details