ನವದೆಹಲಿ:ದೇಶದಲ್ಲಿ ಹೊಸದಾಗಿ 5,379 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸದ್ಯ 50,594 ಸಕ್ರಿಯ ಪ್ರಕರಣಗಳಿವೆ. ನಿನ್ನೆ 27 ಮಂದಿ ಬಲಿಯಾಗಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ.1.67 ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 2 ರಷ್ಟಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಪ್ರತಿಶತ 98.70 ಹೆಚ್ಚಾಗಿದೆ.
ದೇಶದಲ್ಲಿ 5,379 ಹೊಸ ಕೋವಿಡ್ ಪ್ರಕರಣ ಪತ್ತೆ: 27 ಮಂದಿ ಸಾವು - ಕೋವಿಡ್ ಪ್ರಕರಣ
ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲಾದ ಹೊಸ ಕೋವಿಡ್ 19 ಪ್ರಕರಣಗಳು, ಗುಣಮುಖರಾದವರು ಹಾಗು ವ್ಯಾಕ್ಸಿನೇಷನ್ ಮಾಹಿತಿ ಇಲ್ಲಿದೆ.
![ದೇಶದಲ್ಲಿ 5,379 ಹೊಸ ಕೋವಿಡ್ ಪ್ರಕರಣ ಪತ್ತೆ: 27 ಮಂದಿ ಸಾವು India covid report](https://etvbharatimages.akamaized.net/etvbharat/prod-images/768-512-16303921-thumbnail-3x2-news.jpg)
ಸಾಂದರ್ಭಿಕ ಚಿತ್ರ
ಕಳೆದ 24 ಗಂಟೆಗಳ ಅವಧಿಯಲ್ಲಿ 7,094 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇ.1.19 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 213.91 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ:ಕರ್ನಾಟಕದ ಅಭಿವೃದ್ಧಿಗೆ ಕತ್ತಿ ಅವರಿಂದ ಉತ್ಕೃಷ್ಟ ಕೊಡುಗೆ: ಪ್ರಧಾನಿ ಮೋದಿ ಸಂತಾಪ