ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,298 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸದ್ಯ ದೇಶದಲ್ಲಿ 46,748 ಸಕ್ರಿಯ ಪ್ರಕರಣಗಳಿವೆ. ನಿನ್ನೆ 19 ಮಂದಿ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ 5,916 ಮಂದಿ ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿ 6,298 ಹೊಸ ಕೋವಿಡ್ ಪ್ರಕರಣ ಪತ್ತೆ: 19 ಮಂದಿ ಸಾವು - ಕೋವಿಡ್ 19 ಪ್ರಕರಣಗಳು
ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲಾದ ಹೊಸ ಕೋವಿಡ್ 19 ಪ್ರಕರಣಗಳು, ಗುಣಮುಖರಾದವರು ಹಾಗು ವ್ಯಾಕ್ಸಿನೇಷನ್ ಮಾಹಿತಿ ಇಲ್ಲಿದೆ.
ಸಾಂದರ್ಭಿಕ ಚಿತ್ರ
ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಪ್ರತಿಶತ 98.71 ಹೆಚ್ಚಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ.1.89 ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 1.70 ದಾಖಲಾಗಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದಡಿಯಲ್ಲಿ ಈವರೆಗೆ 216.17 ಕೋಟಿ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ:'ಗರ್ಭಿಣಿ ಮಾರ್ಗಮಧ್ಯೆಯೇ ಮಗುವಿಗೆ ಜನ್ಮ ನೀಡಬಹುದು, ಹಾಗಿದೆ ನಮ್ಮ ರಸ್ತೆಗಳ ದುಸ್ಥಿತಿ'