ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,335 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,30,25,775ಕ್ಕೆ ಏರಿದೆ. ಇದು ನಿನ್ನೆಗಿಂತ ಶೇ.8 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ನಿನ್ನೆ 52 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 5,21,181ಕ್ಕೆ ಏರಿದೆ. ಪ್ರಸ್ತುತ ಚೇತರಿಕೆಯ ಪ್ರಮಾಣ ಶೇ.98.75 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 1,918 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,24,90,922 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇ.1.21 ರಷ್ಟಿದೆ. ಪಾಸಿಟಿವಿಟಿ ದರ ಶೇ.0.22 ರಷ್ಟಿದ್ದು, 13,672 ಸಕ್ರಿಯ ಪ್ರಕರಣಗಳಿವೆ.