ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಹೊಸದಾಗಿ 43,393 ಕೋವಿಡ್ ಕೇಸ್ ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಒಟ್ಟು 44,459 ಮಂದಿ ಗುಣಮುಖರಾಗಿದ್ದಾರೆ.
ಭಾರತದಲ್ಲಿ ಈವರೆಗೆ 3,07,52,950 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 2,98,88,284 ಮಂದಿ ಚೇತರಿಸಿಕೊಂಡಿದ್ದಾರೆ. ಈತನಕ 4,05,939 ಮಂದಿ ಸೋಂಕಿತರು ಕೋವಿಡ್ಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 911 ಮಂದಿ ಕೊನೆಯುಸಿರೆಳೆದಿದ್ದಾರೆ.