ನವದೆಹಲಿ: ದೇಶದಲ್ಲಿ ಸಾಂಕ್ರಾಮಿಕ ಕೋವಿಡ್-19 ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತೊಮ್ಮೆ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಸೇವೆಗಳ ಮೇಲಿನ ನಿರ್ಬಂಧವನ್ನು ವಿಸ್ತರಿಸಿದೆ.
ವಾಣಿಜ್ಯ ಪ್ರಯಾಣಿಕ ವಿಮಾನಗಳ ಮೇಲಿನ ನಿರ್ಬಂಧಗಳು ಸೆಪ್ಟೆಂಬರ್ 30ರವರೆಗೆ ಜಾರಿಯಲ್ಲಿರುತ್ತವೆ. ಆದರೆ ಸರಕು ವಿಮಾನಗಳ ಸೇವೆ ಎಂದಿನಂತೆ ಮುಂದುವರಿಯಲಿದೆ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ನಿರ್ಬಂಧಿತ ವಾಯು ಮಾರ್ಗಗಳಲ್ಲಿ ಅಧಿಕಾರಿಗಳು ಅನುಮೋದಿಸಿದ ಅಂತಾರಾಷ್ಟ್ರೀಯ ವಿಮಾನಗಳಿಗೆ ಈ ನಿರ್ಬಂಧಗಳಿಂದ ವಿನಾಯಿತಿ ಇದೆ.