ಹೈದರಾಬಾದ್:ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮುಂದಿನ ನಡೆ ಕುರಿತು ಗೌಪ್ಯತೆ ಕಾಯ್ದುಕೊಂಡಿದ್ದಾರೆ. ಯಾವ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆಂಬ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದ್ರೆ ಕಾಂಗ್ರೆಸ್ ತೊರೆಯುವುದಾಗಿ ಹೇಳಿದ್ದು, ಬಿಜೆಪಿ ಸೇರಲ್ಲ ಎಂದಿದ್ದಾರೆ.
ಇದರ ಮಧ್ಯೆ ಭಾರತದ ಫುಟ್ಬಾಲ್ ತಂಡದ ಗೋಲ್ಕೀಪರ್ ಅಮರಿಂದರ್ ಸಿಂಗ್ ಮಾಧ್ಯಮ ಹಾಗೂ ಪತ್ರಕರ್ತರ ಬಳಿ ಮನವಿ ಮಾಡಿಕೊಂಡಿದ್ದು, ನನಗೆ ಟ್ಯಾಗ್ ಮಾಡುವುದನ್ನು ನಿಲ್ಲಿಸುವಂತೆ ಟ್ವಿಟರ್ನಲ್ಲಿ ಒತ್ತಾಯಿಸಿದ್ದಾರೆ.
"ಆತ್ಮೀಯ ಸುದ್ದಿ ಮಾಧ್ಯಮದವರೇ, ಪತ್ರಕರ್ತರೇ, ನಾನು ಅಮರಿಂದರ್ ಸಿಂಗ್, ಭಾರತೀಯ ಫುಟ್ಬಾಲ್ ತಂಡದ ಗೋಲ್ಕೀಪರ್. ಪಂಜಾಬ್ ರಾಜ್ಯದ ಮಾಜಿ ಮುಖ್ಯಮಂತ್ರಿ ಅಲ್ಲ. ದಯವಿಟ್ಟು ನನಗೆ ಟ್ಯಾಗ್ ಮಾಡುವುದನ್ನು ನಿಲ್ಲಿಸಿ" ಎಂದು ಬರೆದುಕೊಂಡಿದ್ದಾರೆ.