ನವದೆಹಲಿ:ದೇಶದಲ್ಲಿ ಕೋವಿಡ್ ಸಾವಿನ ಪ್ರಕರಣಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯ ಗಣಿತದ ಮಾದರಿ ಬಳಕೆಯನ್ನು ಭಾರತ ತಿರಸ್ಕರಿಸಿದೆ. ಈ ಅಂಕಿ-ಸಂಖ್ಯೆಗಳು ವಾಸ್ತವ ಚಿತ್ರಣದಿಂದ ಸಂಪೂರ್ಣ ಭಿನ್ನವಾಗಿದೆ ಎಂದು ಹೇಳಿದೆ. ದೇಶವು ಜನನ-ಮರಣ ನೋಂದಣಿಗೆ ಅತ್ಯಂತ ದೃಢವಾದ ವ್ಯವಸ್ಥೆಯನ್ನು ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರತಿಪಾದಿಸಿದೆ.
ವಿಶ್ವ ಆರೋಗ್ಯ ಸಂಸ್ಥೆಯ ದತ್ತಾಂಶ ಸಂಗ್ರಹದ ವ್ಯವಸ್ಥೆಯು ಸಂಖ್ಯಾಶಾಸ್ತ್ರೀಯವಾಗಿ ಮತ್ತು ವೈಜ್ಞಾನಿಕವಾಗಿ ಅಸ್ಪಷ್ಟ ಹಾಗೂ ಪ್ರಶ್ನಾರ್ಹವಾಗಿದೆ. WHO ಗುರುವಾರ ಬಿಡುಗಡೆಯಾದ ವರದಿಯಲ್ಲಿ 2020ರ ಜನವರಿ ಮತ್ತು 2021ರ ಡಿಸೆಂಬರ್ ಅವಧಿಯಲ್ಲಿ ಭಾರತದಲ್ಲಿ ಕೋವಿಡ್-19 ಸೋಂಕಿನಿಂದ 4.7 ಮಿಲಿಯನ್ಗೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಹೇಳಿತ್ತು. ಇದು ವಾಸ್ತವ ಅಂಕಿ-ಅಂಶಗಳಿಗೆ ಹೋಲಿಸಿದರೆ 10 ಪಟ್ಟು ಹೆಚ್ಚಾಗಿದ್ದು, ಜಾಗತಿಕ ಮಟ್ಟದಲ್ಲಿ ಸಾವಿನ ಪ್ರಮಾಣದ ಮೂರನೇ ಒಂದು ಭಾಗದಷ್ಟಿದೆ.