ಕರ್ನಾಟಕ

karnataka

ETV Bharat / bharat

ಅಲ್ಪ ಏರಿಕೆ ಕಂಡ ಕೋವಿಡ್​ ಕೇಸ್​.. 23,529 ಮಂದಿಗೆ ಸೋಂಕು ದೃಢ: 311 ಮಂದಿ ಸಾವು - ಭಾರತ ಕೊರೊನಾ ವರದಿ

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗಿತ್ತು. ಇದೀಗ ಮತ್ತೆ ಮೆಲ್ಲಗೆ ಸೋಂಕಿತರ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 23,529 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.

Covid
Covid

By

Published : Sep 30, 2021, 10:56 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 23,529 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 311 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಹಾಮಾರಿ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ 28,718 ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 3,30,14,898ಕ್ಕೆ ಏರಿಕೆಯಾಗಿದೆ. 2,770,20 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,37,39,980ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ 311 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ನಾಲ್ಕು ಲಕ್ಷದ 48 ಸಾವಿರದ 62 ಜನರು ಕೋವಿಡ್​ನಿಂದ ಮೃತಪಟ್ಟಿದ್ದಾರೆ.

ದೇಶದ ಎಲ್ಲ ರಾಜ್ಯಗಳಿಗೆ ಹೋಲಿಸಿದರೆ ಕೇರಳದಲ್ಲಿ ಅತಿ ಹೆಚ್ಚು ಕೋವಿಡ್​ ಪ್ರಕರಣಗಳು ದಾಖಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 12,161 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, 155 ಜನ ಸಾವನ್ನಪ್ಪಿದ್ದಾರೆ.

ನಿನ್ನೆ ದೇಶದಲ್ಲಿ 15 ಲಕ್ಷದ 6 ಸಾವಿರದ 254 ಮಂದಿಗೆ ಕೋವಿಡ್​ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. ಜೊತೆಗೆ 65, 34, 306 ಡೋಸ್ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ABOUT THE AUTHOR

...view details