ನವದೆಹಲಿ :ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,150 ಜನರಿಗೆ ಸೋಂಕು ತಗುಲಿದೆ. ನಿನ್ನೆಗಿಂತ 175ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,558ಕ್ಕೆ ಏರಿಕೆಯಾಗಿದೆ. ಇದು ಒಟ್ಟು ಪ್ರಕರಣಗಳಲ್ಲಿ ಶೇ.0.03ರಷ್ಟಿದೆ. ಇದೇ ವೇಳೆ ದೈನಂದಿನ ಕೇಸ್ ಪಾಸಿಟಿವಿಟಿ ದರವು ಶೇ.0.31ರಷ್ಟಿದೆ.
ಕಳೆದ 24 ಗಂಟೆಯಲ್ಲಿ 954 ಸೋಂಕಿತರು ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,25,08,788ಕ್ಕೆ ಏರಿದೆ. ಚೇತರಿಕೆಯ ಪ್ರಮಾಣವು ಪ್ರಸ್ತುತ ಶೇಕಡಾ 98.76 ರಷ್ಟಿದೆ. ಸಚಿವಾಲಯದ ಪ್ರಕಾರ, ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ನಾಲ್ಕು ಜನ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಮೃತರ ಸಂಖ್ಯೆ 5,21,751ಕ್ಕೆ ಏರಿಕೆಯಾಗಿದೆ.