ನವದೆಹಲಿ:ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,581 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 33 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸೋಂಕಿಗೊಳಗಾದ 127 ಮಂದಿ ಸಾವನ್ನಪ್ಪುವ ಮೂಲಕ ಒಟ್ಟು ಮೃತರ ಸಂಖ್ಯೆ 5,16,543ಕ್ಕೆ ಏರಿದೆ ಕಂಡಿದೆ. ದಿನೇ ದಿನೆ ಸೋಂಕಿನ ಪ್ರಕರಣ ಇಳಿಮುಖವಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 23,913ಕ್ಕೆ ಇಳಿದಿದೆ. ಸದ್ಯ ಶೇ.0.06ರಷ್ಟು ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಗಳಲ್ಲಿ ಒಟ್ಟು 2,741 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಕೋವಿಡ್ ಪ್ರಾರಂಭವಾದಾಗಿನಿಂದ ಕೊರೊನಾ ವಿರುದ್ಧ ಹೋರಾಡಿ ಗುಣಮುಖರಾದವರ ಸಂಖ್ಯೆ 4,24,70,515ರಷ್ಟಿದ್ದು, ಚೇತರಿಕೆಯ ಪ್ರಮಾಣವು ಶೇ. 98.74ರಷ್ಟು ತಲುಪಿದೆ.
ಸದ್ಯ ವಾರದ ಕೋವಿಡ್ ಪಾಸಿಟಿವಿಟಿ ದರವು ಶೇ. 0.28ರಷ್ಟಿದ್ದರೆ, ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇ.0.39ರಷ್ಟಿದೆ ಎಂದು ವರದಿಯಾಗಿದೆ. ದೇಶದಲ್ಲಿ ಲಸಿಕೆ ನೀಡುವ ಕೆಲಸ ಮುಂದುವರೆದಿದೆ. ಇದುವರೆಗೆ ಒಟ್ಟು 1,81,56,01,944 ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: 4 ತಿಂಗಳ ಬಳಿಕ ಗ್ರಾಹಕರ ಜೇಬಿಗೆ ಕತ್ತರಿ; ಪೆಟ್ರೋಲ್, ಡೀಸೆಲ್ ಲೀಟರ್‌ಗೆ ತಲಾ 80 ಪೈಸೆ, LPG ಸಿಲಿಂಡರ್ ಬೆಲೆ 50 ರೂ.ಏರಿಕೆ