ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,075 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 71 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ.
ಸೋಂಕಿಗೊಳಗಾದ 71 ಮಂದಿ ಸಾವನ್ನಪ್ಪುವ ಮೂಲಕ ಒಟ್ಟು ಸಾವಿನ ಸಂಖ್ಯೆ 5,16,352ಕ್ಕೆ ಏರಿದೆ. ದಿನೇದಿನೆ ಸೋಂಕು ಪ್ರಕರಣ ಇಳಿಮುಖವಾಗುತ್ತಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 27,802ಕ್ಕೆ ಇಳಿದಿದೆ. ಸದ್ಯ ಶೇ.0.06ರಷ್ಟು ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇನ್ನೂ ಕಳೆದ 24 ಗಂಟೆಗಳಲ್ಲಿ ಒಟ್ಟು 3,383 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಕೋವಿಡ್ ಪ್ರಾರಂಭವಾದಾಗಿನಿಂದ ಕೊರೊನಾ ವಿರುದ್ಧ ಹೋರಾಡಿ ಗುಣಮುಖರಾದವರ ಸಂಖ್ಯೆ 4,24,61,926 ಚೇತರಿಕೆಯ ಪ್ರಮಾಣವು ಶೇ.98.73ರಷ್ಟಿದೆ.