ನವದೆಹಲಿ: ದೇಶದಲ್ಲಿ ಹೊಸದಾಗಿ ಒಟ್ಟು 44,658 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಕೇರಳದಲ್ಲೇ 30,000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 496 ಜನ ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4,36,861 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ 3,44,899 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,26,03,188 ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 32,988 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 3,18,21,428 ಜನರು ಕೊರೊನಾದಿಂದ ಚೇತರಿಕೆ ಕಂಡಿದ್ದಾರೆ. ದೇಶದಲ್ಲಿ ಚೇತರಿಕೆಯ ಪ್ರಮಾಣ 97.60% ಇದೆ.
ಕೇರಳದಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 30,007 ಹೊಸ ಕೇಸ್ಗಳು ಕಂಡುಬಂದಿದ್ದು, 162 ಮಂದಿ ಸಾವನ್ನಪ್ಪಿದ್ದಾರೆ. ಪಾಸಿಟಿವಿದ ದರ ಶೇ 18.03 ಇದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ನೀಡಿದ ಮಾಹಿತಿ ಪ್ರಕಾರ, ದೇಶದಲ್ಲಿ ಆಗಸ್ಟ್ 26 ರವರೆಗೆ 51,49,54,309 ಮಂದಿಗೆ ಕೊರೊನಾ ಸೋಂಕು ಪರೀಕ್ಷೆ ಮಾಡಲಾಗಿದೆ. ನಿನ್ನೆ ಒಂದೇ ದಿನದಲ್ಲಿ 18,24,931 ಮಂದಿಯ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ.