ದೆಹಲಿ:ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಸತತವಾಗಿ ಕಳೆದ 25 ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗುತ್ತಿವೆ.
ಕೇಂದ್ರ ಆರೋಗ್ಯ ಸಚಿವಾಲಯವು ಗುರುವಾರ ನೀಡಿರುವ ಅಂಕಿ-ಅಂಶಗಳ ಪ್ರಕಾರ ಹೊಸದಾಗಿ 6,561 ಜನರಿಗೆ ಮಾತ್ರವೇ ಸೋಂಕು ಪತ್ತೆಯಾಗಿದೆ. ಇದರಲ್ಲಿ 142 ಮಂದಿ ಮೃತಪಟ್ಟಿದ್ದಾರೆ. ಹೊಸ ಪ್ರಕರಣಗಳೊಂದಿಗೆ ಸಕ್ರಿಯ ರೋಗಿಗಳು 77,152 ಇದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ ಶೇ.0.18 ಮಾತ್ರವೇ ಇದ್ದು, ಶೇ.98.62 ಚೇತರಿಕೆ ಪ್ರಮಾಣ ಇದೆ.