ಕರ್ನಾಟಕ

karnataka

ETV Bharat / bharat

ಭಾರತ, ನೈಜೀರಿಯಾದಿಂದ ಭಯೋತ್ಪಾದನಾ ವಿರೋಧಿ ಚರ್ಚೆ - ಕೇಂದ್ರ ವಿದೇಶಾಂಗ ಸಚಿವಾಲಯ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಮತ್ತು ನೈಜೀರಿಯಾ ರಾಷ್ಟ್ರಗಳು ಪರಸ್ಪರ ಸಹಕಾರಕ್ಕೆ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಎಂಇಎ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

India-Nigeria holds strategic and counter-terrorism dialogue
ಭಾರತ, ನೈಜೀರಿಯಾದಿಂದ ಭಯೋತ್ಪಾದನಾ ವಿರೋಧಿ ಚರ್ಚೆ

By

Published : Mar 6, 2021, 3:31 AM IST

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಆಹ್ವಾನದ ಮೇರೆಗೆ ನೈಜೀರಿಯಾದ ಭದ್ರತಾ ಸಲಹೆಗಾರ ನಿವೃತ್ತ ಮೇಜರ್ ಜನರಲ್ ಬಾಬಗಾನಾ ಮೊಂಗುನೋ ದೆಹಲಿಗೆ ಆಗಮಿಸಿದ್ದು, ಇದೇ ಮೊದಲ ಬಾರಿಗೆ ಉಭಯ ದೇಶಗಳ ನಡುವಿನ ಭಯೋತ್ಪಾದನಾ ವಿರೋಧಿ ಸಂವಾದದಲ್ಲಿ ಭಾಗಿಯಾಗಿದ್ದಾರೆ.

ಮಾರ್ಚ್ 4 ಮತ್ತು 5ರಂದು ಈ ಸಭೆ ನಡೆದಿದ್ದು, ಉಭಯ ದೇಶಗಳ ಸಹಭಾಗಿತ್ವದ ಚೌಕಟ್ಟಿನೊಳಗೆ ಭಯೋತ್ಪಾದನೆ, ಶಸ್ತ್ರಾಸ್ತ್ರ ಮತ್ತು ಮಾದಕವಸ್ತು ಕಳ್ಳಸಾಗಣೆ ಮತ್ತು ಕಡಲ್ಗಳ್ಳತನ ಮುಂತಾದ ಸವಾಲುಗಳನ್ನು ಎದುರಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಇಡೀ ದಿನ ಇವ್ರದ್ದೇ ಮಾತು.!

ಎಲ್ಲಾ ರೀತಿಯ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಹೆಚ್ಚಿಸಲು ಎರಡೂ ದೇಶಗಳು ಪರಸ್ಪರ ಸಹಕಾರ ನೀಡಲು ನಿರ್ದಿಷ್ಟ ಕ್ಷೇತ್ರಗಳನ್ನು ಗುರುತಿಸಿವೆ. ಯಾವುದೇ ರೂಪದಲ್ಲಿ ಅಥವಾ ಅಭಿವ್ಯಕ್ತಿಯಲ್ಲಿ ಭಯೋತ್ಪಾದನೆಗೆ ಯಾವುದೇ ಸಮರ್ಥನೆ ಸಾಧ್ಯವಿಲ್ಲ ಎಂದು ದೃಢವಾಗಿ ಎರಡೂ ರಾಷ್ಟ್ರಗಳು ಪ್ರತಿಪಾದಿಸುತ್ತವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎರಡೂ ರಾಷ್ಟ್ರಗಳು ಪರಸ್ಪರ ಸಹಕಾರಕ್ಕೆ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಎಂಇಎ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವೇಳೆ ನೈಜೀರಿಯಾದ ಭದ್ರತಾ ಸಲಹೆಗಾರ ಬಾಬಗಾನಾ ಮೊಂಗುನೋ ಭಾರತದ ವಿದೇಶಾಂಗ ಮಂತ್ರಿ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿದರು. ಇದಕ್ಕೂ ಮೊದಲು ನೈಜೀರಿಯಾ ಭದ್ರತಾ ಸಲಹೆಗಾರರನ್ನು ಭಾರತಕ್ಕೆ ಸ್ವಾಗತಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಜೈಶಂಕರ್ ಟ್ವೀಟ್ ಮಾಡಿದ್ದರು.

ABOUT THE AUTHOR

...view details