ನವದೆಹಲಿ :ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,593 ಹೊಸ ಕೋವಿಡ್-19 ಪ್ರಕರಣ ಪತ್ತೆಯಾಗಿವೆ. ಇದು ಹಿಂದಿನ ದಿನ ದಾಖಲಾದ (2,527) ಪ್ರಕರಣಗಳಿಗಿಂತ ಸ್ವಲ್ಪ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ತಿಳಿಸಿದೆ.
ಅದೇ ಅವಧಿಯಲ್ಲಿ 44 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಮೃತರ ಸಂಖ್ಯೆ 5,22,193ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 15,873 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 1,755 ಮಂದಿ ಚೇತರಿಸಿಕೊಂಡಿದ್ದು, ಒಟ್ಟು 4,25,19,479 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.