ನವದೆಹಲಿ: ಕಳೆದ 24 ಗಂಟೆಗಳಲ್ಲಿ 58,077 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 42,536,137ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದೊಂದು ದಿನದಲ್ಲಿ 657 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ 6,97,802ಕ್ಕೆ ಇಳಿದಿದೆ. ದೈನಂದಿನ ಕೋವಿಡ್ ಪಾಸಿಟಿವಿಟಿ ರೇಟ್ ಶೇ 3.89 ಇದೆ. ಸಾಪ್ತಾಹಿಕ ಪಾಸಿಟಿವಿಟಿ ದರವು ಶೇ5.76 ದಾಖಲಾಗಿದೆ ಎಂದು ಆರೋಗ್ಯಇಲಾಖೆ ತಿಳಿಸಿದೆ.