ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 36,571 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. 540 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿವರೆಗೆ ಮಾರಕ ಸೋಂಕಿನಿಂದ 4,33,589 ಜನರು ಕೊನೆಯುಸಿರೆಳೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಏರುಗತಿಯಲ್ಲಿ ಕೊರೊನಾ: ಕಳೆದ 24 ಗಂಟೆಯಲ್ಲಿ 36,571 ಮಂದಿಗೆ ಸೋಂಕು ದೃಢ - Corona management in India
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,571 ಮಂದಿಗೆ ಸೋಂಕು ದೃಢವಾಗಿದೆ.
ಕೊರೊನಾ
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿಗೆ ಒಳಗಾದವರ ಸಂಖ್ಯೆ 3,23,58,829 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,555 ಮಂದಿ ಗುಣಮುಖರಾಗಿದ್ದು, ಇಲ್ಲಿವರೆಗೆ 3,15,61,635 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಉಳಿದಂತೆ 3,63,605 ಕೇಸ್ ಸಕ್ರಿಯವಾಗಿದ್ದು, 150 ದಿನಗಳಲ್ಲಿ ಕಡಿಮೆ ಪ್ರಕರಣ ದಾಖಲಾಗಿವೆ.
ಜನವರಿಯಿಂದ ದೇಶಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಆರಂಭವಾಗಿದ್ದು, ಇಲ್ಲಿಯವರೆಗೆ ಒಟ್ಟು 57,22,81,488 ಮಂದಿಗೆ ಲಸಿಕೆಯನ್ನು ನೀಡಲಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 54,71,282 ಮಂದಿ ವ್ಯಾಕ್ಸಿನ್ ಪಡೆದಿದ್ದಾರೆ.