ನವದೆಹಲಿ:ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟ ಮುಂದುವರೆದಿದ್ದು, ಭಾರತದಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ಕಾಲಿಟ್ಟು ಇಂದಿಗೆ ಒಂದು ವರ್ಷ ತುಂಬಿದೆ. 2020ರ ಜ. 30ರಂದು ಕೇರಳದ ತ್ರಿಶ್ಯೂರ್ನಲ್ಲಿ ಪ್ರಥಮ ಕೇಸ್ ದಾಖಲಾಗಿತ್ತು.
ಇದನ್ನೂ ಓದಿ: ತಾಯಿಯ ಕೊಂದು ಮನೆ ಮುಂದೆ ಸುಟ್ಟು: ಚಿತೆಯಲ್ಲಿ ಕೋಳಿ ಬೇಯಿಸಿ ತಿಂದ ಮಗ!
ಚೀನಾದ ವುಹಾನ್ನಿಂದ ಭಾರತಕ್ಕೆ ಮರಳಿದ್ದ ವಿದ್ಯಾರ್ಥಿಯೋರ್ವನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ಬಳಿಕ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್ಡೌನ್ ಮಾಡಿ ಮಹತ್ವದ ಘೋಷಣೆ ಮಾಡಿದ್ದರು. ಹೀಗಾಗಿ ಶಾಲಾ-ಕಾಲೇಜು, ಚಿತ್ರಮಂದಿರ, ಪಾರ್ಕ್, ದೇವಸ್ಥಾನ ಸೇರಿದಂತೆ ಎಲ್ಲವೂ ಬಂದ್ ಆಗಿದ್ದವು.