ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಒಂದು ಲಕ್ಷಕ್ಕಿಳಿದ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ: 2,427 ಮಂದಿ ಸಾವು - coronavirus death toll india

ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲಾದ ಪ್ರಕರಣಗಳೊಂದಿಗೆ ದೇಶದಲ್ಲಿ ಈವರೆಗಿನ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 2,89,09,975 ಕ್ಕೆ ಏರಿದೆ.

coronavirus latest news
ಒಂದು ಲಕ್ಷಕ್ಕಿಳಿದ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ

By

Published : Jun 7, 2021, 9:51 AM IST

ನವದೆಹಲಿ: ಕಳೆದ 24 ಗಂಟೆಯಲ್ಲಿ 1,00,636 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 2,427 ಸೋಂಕಿನಿಂದ ಮಂದಿ ಸಾವನ್ನಪ್ಪಿದ್ದಾರೆ. 1,74,399 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗಿನ ಅಂಕಿಅಂಶ:

ದೇಶದಲ್ಲಿ ಈವರೆಗೆ ಒಟ್ಟು 2,89,09,975 ಕೊರೊನಾ ಪ್ರಕರಣಗಳು ದಾಖಲಾಗಿವೆ. 2,71,59,180 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 3,49,186 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 14,01,609 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

ಕೋವಿಡ್ ಪರೀಕ್ಷೆ:

ಜೂನ್ 6 ರ ವರೆಗೆ 36,63,34,111 ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ. ನಿನ್ನೆ ಒಂದೇ ದಿನ 15,87,589 ಸ್ಯಾಂಪಲ್ಸ್ ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.

ಲಸಿಕೆ ವಿತರಣೆ:

ದೇಶಾದ್ಯಂತ ಇಲ್ಲಿಯವರೆಗೆ 23,27,86,482 ಜನರಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ.

ABOUT THE AUTHOR

...view details