ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 10,423 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿದ್ದು, ಹಿಂದಿನ 259 ದಿನಗಳಿಗೆ ಹೋಲಿಸಿದ್ರೆ ಹೊಸ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸದ್ಯ ಭಾರತದಲ್ಲಿ 1,53,776 ಸಕ್ರಿಯ ಪ್ರಕರಣಗಳಿದ್ದು, ಕಳೆದ 250 ದಿನಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. 443 ಮಂದಿ ನಿನ್ನೆ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 4,58,880 ಕ್ಕೆ ಏರಿಕೆಯಾಗಿದೆ.