ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 10,853 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,43,55,536 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
India COVID Report: ಹೊಸದಾಗಿ 10,853 ಕೊರೊನಾ ಕೇಸ್ ಪತ್ತೆ, 526 ಜನ ಬಲಿ - ಭಾರತ ಕೊರೊನಾ ನ್ಯೂಸ್
ದೇಶದಲ್ಲಿ ಕೋವಿಡ್-19(COVID-19) ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 10,853 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 526 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
COVID
ಕಳೆದ 260 ದಿನಗಳಿಗೆ ಹೋಲಿಸಿದರೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಸದ್ಯಕ್ಕೆ ಭಾರತದಲ್ಲಿ 1,44,845 ಸಕ್ರಿಯ ಪ್ರಕರಣಗಳಿವೆ. ನಿನ್ನೆ 12,432 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 3,37,49,900 ಕ್ಕೆ ತಲುಪಿದೆ.
ಮಹಾಮಾರಿ ಸೋಂಕಿಗೆ ನಿನ್ನೆ 526 ಮಂದಿ ಸಾವನ್ನಪ್ಪಿದ್ದಾರೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನ ನಿರಂತರವಾಗಿ ನಡೆಯುತ್ತಿದೆ. ಇದುವರೆಗೆ ಒಟ್ಟು 108.21 ಕೋಟಿ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.