ಕರ್ನಾಟಕ

karnataka

By

Published : Feb 7, 2021, 10:56 AM IST

ETV Bharat / bharat

24 ಗಂಟೆಯಲ್ಲಿ ದೇಶಾದ್ಯಂತ ಅತಿ ಕಡಿಮೆ ಕೋವಿಡ್​ ಸಾವು ವರದಿ.. ಈವರೆಗೆ 57 ಲಕ್ಷ ಮಂದಿಗೆ ಲಸಿಕೆ

ಈವರೆಗೆ ಭಾರತದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 57,75,322 ಮಂದಿಗೆ ಲಸಿಕೆ ನೀಡಲಾಗಿದೆ.

Total number of corona cases and deaths in India
ನಿನ್ನೆ ದೇಶದಲ್ಲಿ ಅತಿ ಕಡಿಮೆ ಕೋವಿಡ್​ ಸಾವು ವರದಿ

ನವದೆಹಲಿ: ಭಾರತದಲ್ಲಿ ಕೋವಿಡ್ ಮೃತರ ಸಂಖ್ಯೆ 1,54,996ಕ್ಕೆ ಏರಿಕೆಯಾಗಿದ್ದರೂ ಸಹ ಇತರ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಸೋಂಕಿ​ಗೆ ಬಲಿಯಾದವರ ಸಂಖ್ಯೆ ಕಡಿಮೆಯಿದೆ. ಕೆಲ ತಿಂಗಳ ಹಿಂದೆ ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದರು. ಕ್ರಮೇಣ ಈ ಸಂಖ್ಯೆ ಇಳಿಕೆಯಾಗುತ್ತಾ ಬಂದಿದ್ದು, ಶನಿವಾರ ಅತಿ ಕಡಿಮೆ ಅಂದರೆ 78 ಸಾವು ವರದಿಯಾಗಿದೆ.

ಕಳೆದ 24 ಗಂಟೆಗಳಲ್ಲಿ 12,059 ಕೇಸ್​ಗಳು ಪತ್ತೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 1,08,26,363ಕ್ಕೆ ಏರಿಕೆಯಾಗಿದೆ. ಆದರೆ ಈ ಪೈಕಿ 1,05,22,601 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, 1,48,766 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್​ ಟೆಸ್ಟಿಂಗ್​ ಅಪ್​ಡೇಟ್ಸ್​​

ಜನವರಿ 16ರಿಂದ ನಿನ್ನೆಯವರೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಕೋವಿಡ್​ ವಿರುದ್ಧದ ಹೋರಾಟದಲ್ಲಿರುವ ಮುಂಚೂಣಿ ಕಾರ್ಮಿಕರು ಸೇರಿ 57,75,322 ಮಂದಿಗೆ ಲಸಿಕೆ ನೀಡಲಾಗಿದೆ.

ಫೆಬ್ರವರಿ​ 6ರ ವರೆಗೆ 20 ಕೋಟಿಗೂ ಹೆಚ್ಚು (20,13,68,378) ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 6,95,789 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ABOUT THE AUTHOR

...view details