ನವದೆಹಲಿ :ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,514 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 251 ಜನ ಮೃತಪಟ್ಟಿದ್ದಾರೆ. ಆದರೆ, ಈ ಪೈಕಿ ಕೇರಳ ರಾಜ್ಯವೊಂದರಲ್ಲೇ 7,167 ಕೇಸ್ ಹಾಗೂ 167 ಸಾವು ವರದಿಯಾಗಿವೆ.
ಇದೀಗ ಭಾರತದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,42,85,814, ಹಾಗೂ ಮೃತರ ಸಂಖ್ಯೆ 4,58,437ಕ್ಕೆ ಹೆಚ್ಚಳವಾಗಿದೆ. ಒಟ್ಟು ಸೋಂಕಿತರ ಪೈಕಿ ಶೇ.98.20ರಷ್ಟು ಅಂದರೆ 3,36,68,560 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಳಿದಂತೆ 1,58,817 ಕೇಸ್ಗಳು (ಶೇ.0.46) ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.