ನವದೆಹಲಿ :ಕಳೆದೊಂದು ದಿನದಲ್ಲಿ ದೇಶದಲ್ಲಿ 1,27,510 ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ. 2,795 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 2,55,287 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿಅಂಶ :ದೇಶದಲ್ಲಿ ಈವರೆಗೆ ಒಟ್ಟು 2,81,75,044 ಕೊರೊನಾ ಪ್ರಕರಣ ದಾಖಲಾಗಿವೆ. 2,59,47,629 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 3,31,895 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 18,95,520 ಸಕ್ರಿಯ ಕೋವಿಡ್ ಪ್ರಕರಣಗಳಿವೆ.