ಕರ್ನಾಟಕ

karnataka

ETV Bharat / bharat

ದೇಶದಲ್ಲಿ ನಿನ್ನೆಗಿಂತ ಕೊಂಚ ಇಳಿಕೆಯಾದ ಕೋವಿಡ್​ ಪ್ರಮಾಣ.. ಇಂದು ಎಷ್ಟು ಗೊತ್ತಾ!?

ದೇಶದಲ್ಲಿ ಮಹಾಮಾರಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಕೊಂಚ ಕಡಿಮೆಯಾಗಿವೆ.

India Covid report  India corona death report  India corona vaccine report  India covid active case report  India covid recovery report  India corona news  ಭಾರತ ಕೋವಿಡ್ ವರದಿ  ಭಾರತ ಕೊರೊನಾ ಸಾವು ವರದಿ  ಭಾರತ ಕೊರೊನಾ ಲಸಿಕೆ ವರದಿ  ಭಾರತ ಕೋವಿಡ್ ಸಕ್ರಿಯ ಪ್ರಕರಣಗಳ ವರದಿ  ಭಾರತ ಕೋವಿಡ್​ ಗುಣಮುಖ ವರದಿ  ಭಾರತ ಕೊರೊನಾ ಸುದ್ದಿ
ದೇಶದಲ್ಲಿ ನಿನ್ನೆಗಿಂತ ಕೊಂಚ ಇಳಿಕೆಯಾದ ಕೋವಿಡ್​ ಸಂಖ್ಯೆ

By

Published : Jun 20, 2022, 11:55 AM IST

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ ಸೋಂಕಿತರ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 12,781 ಹೊಸ ಕೇಸ್​​​ಗಳು ದೃಢಪಟ್ಟಿದ್ದು, 18 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದೊಂದು ದಿನದಲ್ಲಿ 8,537 ಜನರು ಕೋವಿಡ್​​ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಈವರೆಗೆ ಒಟ್ಟು 4,27,07,900 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 76,700 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,24,873 ಕ್ಕೆ ಏರಿಕೆಯಾಗಿದೆ.

ಓದಿ:ಪ್ರಧಾನಿ ಮೋದಿ ಕಾರ್ಯಕ್ರಮ: ಸಿಎಂ ಬೊಮ್ಮಾಯಿಗೆ ಕೋವಿಡ್ ಪರೀಕ್ಷೆ

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜೂನ್ 19 ರವರೆಗೆ 85.81 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಭಾನುವಾರ 2,96,050 ಮಂದಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದೆ. ಪ್ರಸ್ತುತ ಚೇತರಿಕೆಯ ಪ್ರಮಾಣವು ಪ್ರಸ್ತುತ ಶೇ 98.61 ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರವು ಶೇ 4.32 ರಷ್ಟಿದೆ. ಇಲ್ಲಿಯವರೆಗೆ 196.18 ಕೋಟಿ ಕೊರೊನಾ ಡೋಸ್​ಗಳನ್ನು ನೀಡಲಾಗಿದೆ.

ABOUT THE AUTHOR

...view details