ನವದೆಹಲಿ: ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿತ್ತು. ಆದರೆ ಇದೀಗ ಕಳೆದ 24 ಗಂಟೆಯಲ್ಲಿ 14,199 ಹೊಸ ಕೇಸ್ಗಳು ಪತ್ತೆಯಾಗಿದೆ.
ಕಳೆದ 24 ಗಂಟೆಯಲ್ಲಿ 14,199 ಹೊಸ ಕೋವಿಡ್ ಕೇಸ್; 83 ಮಂದಿ ಬಲಿ - ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 14,199 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಮತ್ತು 83 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಭಾರತದಲ್ಲಿ ಒಟ್ಟಾರೆ 1,10,05,850 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ ದೇಶದಲ್ಲಿ 1,50,055 ಸಕ್ರಿಯ ಪ್ರಕರಣಗಳಿವೆ ಮತ್ತು 1,06,99,410 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 1,56,385 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಒಟ್ಟು 1,11,16,854 ಜನರು ವ್ಯಾಕ್ಸಿನೇಷನ್ ಪಡೆದುಕೊಂಡಿದ್ದಾರೆ.
ಇನ್ನು ಕೊರೊನಾ ಪ್ರಕರಣಗಳ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಈ ಪ್ರಕಾರ ಕಳೆದ 24 ಗಂಟೆಗಳಲ್ಲಿ 14,199 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 9,695 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಮತ್ತು 83 ಮಂದಿ ಸಾವನ್ನಪ್ಪಿದ್ದಾರೆ.