ಕರ್ನಾಟಕ

karnataka

ETV Bharat / bharat

ದೇಶದಲ್ಲಿ ದಿಢೀರ್ ಕೋವಿಡ್​ ಮೃತರ ಸಂಖ್ಯೆ ಏರಿಕೆ: ನಿನ್ನೆ ಒಂದೇ ದಿನ 805 ಮಂದಿ ಬಲಿ - ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 14,348 ಕೋವಿಡ್​ ಸೋಂಕಿತರು ಪತ್ತೆಯಾಗಿದ್ದಾರೆ. ಆದರೆ, 805 ಮಂದಿ ಸಾವನ್ನಪ್ಪಿದ್ದಾರೆ.

ದಿಢೀರನೆ ಕೋವಿಡ್​ ಮೃತರ ಸಂಖ್ಯೆಯಲ್ಲಿ ಏರಿಕೆ
ದಿಢೀರನೆ ಕೋವಿಡ್​ ಮೃತರ ಸಂಖ್ಯೆಯಲ್ಲಿ ಏರಿಕೆ

By

Published : Oct 29, 2021, 10:03 AM IST

ನವದೆಹಲಿ:ಭಾರತದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆ ವರದಿಯಾಗುತ್ತಿದ್ದರೂ ಕೂಡ ಸೋಂಕಿಗೆ ಬಲಿಯಾಗುತ್ತಿರುವ ಸಂಖ್ಯೆ ಮಾತ್ರ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 14,348 ಸೋಂಕಿತರು ಪತ್ತೆಯಾಗಿದ್ದಾರೆ. ಆದರೆ, 805 ಮಂದಿ ಮೃತಪಟ್ಟಿದ್ದಾರೆ.

ನಿನ್ನೆ ವರದಿಯಾದ ಒಟ್ಟು ಕೊರೊನಾ ಸಾವು-ನೋವಿನ ಪೈಕಿ ಕೇರಳದಲ್ಲೇ 7,838 ಕೇಸ್​ಗಳು ಹಾಗೂ 90 ಸಾವು ದಾಖಲಾಗಿದೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,42,46,157ಕ್ಕೆ ಹಾಗೂ ಮೃತರ ಸಂಖ್ಯೆ 4,57,191ಕ್ಕೆ ಹೆಚ್ಚಳವಾಗಿದೆ.

ಇಲ್ಲಿಯವರೆಗೆ ಶೇ.99.19 ರಷ್ಟು ಅಂದರೆ 3,36,27,632 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಆ್ಯಕ್ಟಿವ್​ ಕೇಸ್​ಗಳ ಪ್ರಮಾಣ ಶೇ.0.47ಕ್ಕೆ ಕೆಳಗಿಳಿದಿದ್ದು, ಸದ್ಯ 1,61,334 ಕೇಸ್​ಗಳು ಮಾತ್ರ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

104.82 ಕೋಟಿ ಡೋಸ್​ ವ್ಯಾಕ್ಸಿನೇಷನ್​

ಜನವರಿ 16ರಿಂದ ದೇಶಾದ್ಯಂತ ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನ ಆರಂಭವಾಗಿದ್ದು, ಇಲ್ಲಿಯವರೆಗೆ 1,04,82,00,966 ಡೋಸ್ ನೀಡಲಾಗಿದೆ. ನಿನ್ನೆ ಒಂದೇ ದಿನ 66 ಲಕ್ಷ ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.

ABOUT THE AUTHOR

...view details