ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ ಸೋಂಕಿತರ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 14,506 ಹೊಸ ಕೇಸ್ಗಳು ದೃಢಪಟ್ಟಿದ್ದು, 30 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ 11,574 ಜನರು ಕೋವಿಡ್ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 4,28,08,666 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 99,602 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,25,077 ಕ್ಕೆ ಏರಿಕೆಯಾಗಿದೆ.