ಕರ್ನಾಟಕ

karnataka

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,989 ಕೊರೊನಾ ಸೋಂಕಿತರು ಪತ್ತೆ: 98 ಮಂದಿ ಬಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,989 ಹೊಸ ಕೊರೊನಾ ಕೇಸ್​​ಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

By

Published : Mar 3, 2021, 10:17 AM IST

Published : Mar 3, 2021, 10:17 AM IST

COVID19 cases
COVID19 cases

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,989 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 98 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,11,39,516 ಕ್ಕೆ ಏರಿಕೆಯಾಗಿದೆ.

13,123 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದು, ಇದುವರೆಗೆ 1,08,12,044 ಮಂದಿ ಗುಣಮುಖರಾಗಿದ್ದಾರೆ. 1,70,126 ಸಕ್ರಿಯ ಪ್ರಕರಣಗಳಿದ್ದು, ಈಗಾಗಲೇ 1,56,20,749 ಜನರು ವಾಕ್ಸಿನೇಷನ್​ ಪಡೆದಿದ್ದಾರೆ.

ಇನ್ನು ಒಟ್ಟಾರೆಯಾಗಿ 1,57,346 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details