ನವದೆಹಲಿ: ಇಂದಿನಿಂದ ದೇಶಾದ್ಯಂತ ಕೊರೊನಾ ಲಸಿಕೆ ವಿತರಿಲಾಗುತ್ತಿದೆ. ವಿಶ್ವದ ಅತಿದೊಡ್ಡ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹೀಗಾಗಿ ವೈರಸ್ನಿಂದ ದೇಶದಲ್ಲಾಗುವ ಸಾವು-ನೋವು ತಡೆಗಟ್ಟಲು ಅಸ್ತ್ರ ಸಿದ್ಧವಾಗಿದೆ. ಈ ಲಸಿಕೆಗಳು ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿದ್ದು, ಜೀವಗಳನ್ನು ಉಳಿಸಲಿದೆ ಎಂದು ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ.
ದೇಶದಲ್ಲಿ ನಿನ್ನೆ 15,158 ಮಂದಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 175 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಪ್ರಕರಣಗಳ ಸಂಖ್ಯೆ 1,05,42,841 ಹಾಗೂ ಮೃತರ ಸಂಖ್ಯೆ 1,52,093ಕ್ಕೆ ಏರಿಕೆಯಾಗಿದೆ.