ನವದೆಹಲಿ: ಎರಡನೇ ಕೋವಿಡ್ ಅಲೆಯಲ್ಲಿ ದಿನದಿನಕ್ಕೂ ದೇಶದಲ್ಲಿ ದಾಖಲೆಯ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಶನಿವಾರ ಒಂದೇ ದಿನ ಬರೋಬ್ಬರಿ 1,52,879 ಸೋಂಕಿತರು ಪತ್ತೆಯಾಗಿದ್ದು, 839 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲೀಗ ಕೊರೊನಾ ಕೇಸ್ಗಳ ಸಂಖ್ಯೆ 1,33,58,805 ಹಾಗೂ ಸಾವಿನ ಸಂಖ್ಯೆ 1,69,275ಕ್ಕೆ ಏರಿಕೆಯಾಗಿದೆ. ಹೊಸ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ ಕಂಡುಬಂದಿದ್ದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 11,08,087ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 90,584 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು ಸೋಂಕಿತರ ಪೈಕಿ 1,20,81,443 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.