ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ತೀವ್ರಗತಿಯಲ್ಲಿ ಏರುಗತಿಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,59,632 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.
ಒಂದೇ ದಿನದಲ್ಲಿ 40,863 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 3,44,53,603 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಣಮುಖರಾಗುವವರ ಪ್ರಮಾಣ ಶೇಕಡಾ 98.13ರಷ್ಟಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳು ಒಟ್ಟು 5,90,611 ಮಂದಿ ಇದ್ದು, ಈಗ ಒಟ್ಟು ಸೋಂಕಿತರಲ್ಲಿ ಶೇಕಡಾ 1.66ರಷ್ಟು ಮಂದಿ ಸಕ್ರಿಯ ಸೋಂಕಿತರಿದ್ದಾರೆ.
ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 10.21ರಷ್ಟಿದೆ. ಕಳೆದ 24 ಗಂಟೆಯಲ್ಲಿ 327 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಸುಮಾರು 4,83,790 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್:
ಈವರೆಗೆ ಸುಮಾರು 69,00,34,525 ಕೋಟಿ ಬಾರಿ ಸೋಂಕು ಪರೀಕ್ಷೆ ಮಾಡಲಾಗಿದೆ. ಶನಿವಾರ ಒಂದೇ ದಿನ 15,63,566 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮಾಹಿತಿ ನೀಡಿದೆ. ಈವರೆಗೆ ಸುಮಾರು 1,51,57,60,645 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ.
ಒಮಿಕ್ರಾನ್ ಸೋಂಕು:
ಆರೋಗ್ಯ ಇಲಾಖೆಯ ಮಾಹಿತಿಯಂತೆ, ದೇಶದ ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ 27 ರಾಜ್ಯಗಳಲ್ಲಿ ಒಮಿಕ್ರಾನ್ ಸೋಂಕು ಕಂಡು ಬಂದಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಂದಿ ಸೋಂಕಿತರು ಕಂಡುಬಂದಿದ್ದು, ನಂತರ ಸ್ಥಾನದಲ್ಲಿ ದೆಹಲಿ, ಕರ್ನಾಟಕ ಮತ್ತು ರಾಜಸ್ಥಾನ ರಾಜ್ಯಗಳಿವೆ.
ಈವರೆಗೆ ದೇಶದಲ್ಲಿ 3,623 ಮಂದಿ ಒಮಿಕ್ರಾನ್ ಸೋಂಕಿತರು ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 1407 ಮಂದಿ ಗುಣಮುಖರಾಗಿದ್ದಾರೆ.
ಇದನ್ನೂ ಓದಿ:Covid Research: ಪರಸ್ಪರ ನಂಬಿಕೆಯುಳ್ಳ ಸಮುದಾಯಗಳಲ್ಲಿ ಕೊರೊನಾ ಸೋಂಕು, ಸಾವು ಕಡಿಮೆ