ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15,981 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 166 ಮಂದಿ ಮೃತಪಟ್ಟಿದ್ದಾರೆ. ಆದರೆ ಈ ಪೈಕಿ ಕೇರಳ ರಾಜ್ಯವೊಂದರಲ್ಲೇ 8,867 ಕೇಸ್ ಹಾಗೂ 67 ಸಾವು ವರದಿಯಾಗಿದೆ.
ಇದೀಗ ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,40,53,573, ಹಾಗೂ ಮೃತರ ಸಂಖ್ಯೆ 4,51,980ಕ್ಕೆ ಹೆಚ್ಚಳವಾಗಿದೆ. ಒಟ್ಟು ಸೋಂಕಿತರ ಪೈಕಿ ಶೇ.98.08 ರಷ್ಟು ಅಂದರೆ 3,33,99,961 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 2,01,632 ಕೇಸ್ಗಳು (ಶೇ.0.59) ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.