ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದೂ ಕೂಡಾ ಇಳಿಕೆ ಕಂಡು ಬಂದಿದ್ದು, ನಿನ್ನೆಯಿಂದ 2 ಲಕ್ಷದ ಒಳಗೆ ಕೊರೊನಾ ಕೇಸ್ಗಳು ದಾಖಲಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 1,61,386 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 1,733ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸಾವಿನ ಪ್ರಮಾಣ ನಿನ್ನೆಗಿಂತ ಹೆಚ್ಚು ಕಂಡು ಬಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 2,81,109 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ಸದ್ಯಕ್ಕೆ ದೇಶದಲ್ಲಿ 16,21,603 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಕೋವಿಡ್ ಪಾಸಿಟಿವಿಟಿ ರೇಟ್ ಶೇ 9.26ಕ್ಕೆ ಇಳಿಕೆ ಕಂಡಿದೆ.
ಇದನ್ನೂ ಓದಿ:Central Budget: ಹಣಕಾಸು ಸಚಿವಾಲಯದಿಂದ ಟ್ಯಾಬ್ನೊಂದಿಗೆ ಹೊರಟ ನಿರ್ಮಲಾ ಸೀತಾರಾಮನ್