ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,311 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 161 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,04,66,595 ಕ್ಕೆ ಹಾಗೂ ಮೃತರ ಸಂಖ್ಯೆ 1,51,160 ಕ್ಕೆ ಏರಿಕೆಯಾಗಿದೆ.
19,299 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 1,00,92,909 ಜನ ಗುಣಮುಖರಾಗಿದ್ದಾರೆ. ಉಳಿದಂತೆ 2,22,526 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.