ಕರ್ನಾಟಕ

karnataka

ETV Bharat / bharat

ಗಣನೀಯವಾಗಿ ತಗ್ಗಿದ ಕೋವಿಡ್‌; ದೇಶದಲ್ಲಿ 1.72 ಲಕ್ಷ ಹೊಸ ಕೊರೊನಾ ಪ್ರಕರಣ ದಾಖಲು; 1008 ಸೋಂಕಿತರ ಸಾವು - India reports 1,72,433 fresh COVID cases

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಕೋವಿಡ್‌ ಹೊಸ ಪ್ರಕರಣಗಳು ದಾಖಲಾಗಿದ್ದು, 1008 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಲೇ ಇದೆ.

India reports 1,72,433 fresh COVID cases
ಗಣನೀಯವಾಗಿ ತಗ್ಗಿದ ಕೋವಿಡ್‌; ದೇಶದಲ್ಲಿ 1.72 ಲಕ್ಷ ಹೊಸ ಕೊರೊನಾ ಪ್ರಕರಣಗಳು; 1008 ಮಂದಿ ಸಾವು

By

Published : Feb 3, 2022, 9:38 AM IST

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸೋಂಕಿತರಿಗಿಂತ ಚೇತರಿಕೆಯಾಗುತ್ತಿರುವವರ ಸಂಖ್ಯೆಯೇ ಹೆಚ್ಚಾಗುತ್ತಿರುವುದು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಹೊಸದಾಗಿ 1,72,433 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ.

ನಿನ್ನೆ ಒಂದೇ ದಿನ 2,59,107 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 1 ಸಾವಿರದ 8 ಮಂದಿ ಮೃತಪಟ್ಟಿದ್ದಾರೆ. ಸಕ್ರೀಯ ಪ್ರಕರಣಗಳ ಸಂಖ್ಯೆ 15,33,921ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 4,98,983 ಕೊರೊನಾ ವೈರಸ್‌ಗೆ ಬಲಿಯಾಗಿದ್ದಾರೆ.

ದಿನ ನಿತ್ಯದ ಪಾಸಿಟಿವ್‌ ದರ ಶೇ.10.99ರಷ್ಟು ಇದ್ದು, 167.87 ಕೋಟಿ ಕೋವಿಡ್‌ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಯ ಮಾಹಿತಿ ನೀಡಿದೆ. ಕಳೆದೊಂದು ವಾರದಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯ ಹಾದಿಯಲ್ಲೇ ಸಾಗಿದೆ. ಆದರೆ, ಮೃತರ ಸಂಖ್ಯೆ ಮಾತ್ರ ಏರಿಕೆಯಾಗುತ್ತಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ABOUT THE AUTHOR

...view details