ನವೆದೆಹಲಿ : ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,088 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,03,74,932( 1ಕೋಟಿಗೆ) ಕ್ಕೆ ಏರಿದೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,088 ಹೊಸ ಕೊರೊನಾ ಕೇಸ್ ದಾಖಲು - ಭಾರತದಲ್ಲಿ ಕೊರೊನಾ ಸುದ್ದಿ
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 264 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,50,114 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,088 ಹೊಸ ಕೊರೊನಾ ಪ್ರಕರಣಗಳು ವರದಿ
264 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,50,114 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 21,314 ಜನ ಕೋವಿಡ್-19ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 99,97,272 ಏರಿದೆ. 2,27,546 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
ನಿನ್ನೆ 9,31,408 ಮಾದರಿಗಳನ್ನು ಪರೀಕ್ಷಿಸಿದ್ದು, ಜನವರಿ 5 ರ ವರೆಗೆ ಒಟ್ಟು 17,74,63,405 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.