ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 19,968 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 673 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ 20 ಸಾವಿರಕ್ಕಿಂತ ಕಡಿಮೆ ಕೋವಿಡ್ ಸೋಂಕಿತರು ಪತ್ತೆ: 673 ಮಂದಿ ಸಾವು
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬೃಹತ್ ಪ್ರಮಾಣದ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 20 ಸಾವಿರಕ್ಕೂ ಕಡಿಮೆ ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೇಶದ ಜನತೆಯಲ್ಲಿ ನಿರಾಳತೆ ಮೂಡಿದೆ.
ಕೋವಿಡ್
ದೇಶದಲ್ಲಿ ಸದ್ಯಕ್ಕೆ 2,24,187ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ 673 ಮಂದಿ ಮಹಾಮಾರಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಒಟ್ಟು 5,11,903 ಜನ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ, ನಿನ್ನೆ 48,847 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,20,86,383 ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ 1.68% ಇದೆ.
ವ್ಯಾಕ್ಸಿನೇಷನ್: ಈವರೆಗೆ ದೇಶದಲ್ಲಿ ಸುಮಾರು 1,75,37,22,697 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.