ನವದೆಹಲಿ: ಕಳೆದ 24 ಗಂಟೆಯ ಅವಧಿಯಲ್ಲಿ 2,17,353 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ 1,185 ಮಂದಿ ಸಾವನ್ನಪ್ಪಿದ್ದಾರೆ. 1,18,302 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿಅಂಶ:
ದೇಶದಲ್ಲಿ ಈವರೆಗೆ ಒಟ್ಟು 1,42,91,917 ಕೊರೊನಾ ಪ್ರಕರಣಗಳು ದಾಖಲಾಗಿವೆ. 1,25,47,866 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 1,74,308 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 15,69,743 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಇದನ್ನೂ ಓದಿ:ಶುಕ್ರವಾರ,ಶನಿವಾರ 2.5 ಲಕ್ಷ ಕೊರೊನಾ ಟೆಸ್ಟ್ಗೆ ಕೇರಳ ಸರ್ಕಾರದ ನಿರ್ಧಾರ