ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 22,842 ಹೊಸ ಕೋವಿಡ್-19(COVID-19) ಪ್ರಕರಣಗಳು ದೃಢಪಟ್ಟಿದ್ದು 244 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಮಹಾಮಾರಿ ಸೋಂಕಿಗೆ ನಿನ್ನೆ 244 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 4,48,817 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಸದ್ಯಕ್ಕೆ 2,70,557 ಸಕ್ರಿಯ ಪ್ರಕರಣಗಳಿದ್ದು, ಕಳೆದ 199 ದಿನಕ್ಕೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.