ಕರ್ನಾಟಕ

karnataka

ETV Bharat / bharat

ದೇಶದಲ್ಲಿ ತಗ್ಗುತ್ತಿದೆ ಕೊರೊನಾ ಹಾವಳಿ.. ಯಶಸ್ಸು ಕಾಣುತ್ತಿದೆ ಕೊರೊನಾ ವಿರುದ್ಧದ ಭಾರತ ಹೋರಾಟ! - ಭಾರತದಲ್ಲಿ ಲಸಿಕಾಕರಣ ವರದಿ

ಭಾರತದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾಗ್ತಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 2,503 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, 27 ಮಂದಿ ಸಾವನ್ನಪ್ಪಿದ್ದಾರೆ..

India reports fresh covid cases  India vaccination report  India fight against Corona  ಭಾರತದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆ  ಭಾರತದಲ್ಲಿ ಲಸಿಕಾಕರಣ ವರದಿ  ಕೊರೊನಾ ವಿರುದ್ಧ ಭಾರತ ಹೋರಾಟ
ಭಾರತದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆ

By

Published : Mar 14, 2022, 9:41 AM IST

Updated : Mar 14, 2022, 11:29 AM IST

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ 2,503 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,29,93,494ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆ

ಓದಿ:ಟ್ರಕ್ ​- ಟ್ರ್ಯಾಕ್ಟರ್​ ಮಧ್ಯೆ ಭೀಕರ ಅಪಘಾತ: ವಿಠ್ಠಲನ ಪಾದ ಸೇರಿದ 4 ಭಕ್ತರು, 40ಕ್ಕೂ ಹೆಚ್ಚು ಜನರಿಗೆ ಗಾಯ!

ಕಳೆದೊಂದು ದಿನದಲ್ಲಿ 4,377 ಜನರು ಸೋಂಕಿನಿಂದ ಗುಣಮುಖರಾಗುವ ಮೂಲಕ ದೇಶದಲ್ಲಿ ಒಟ್ಟಾರೆ 4,24,41,449 ಮಂದಿ ಪೂರ್ಣ ಚೇತರಿಸಿಕೊಂಡಂತಾಗಿದೆ. ನಿನ್ನೆ 27 ಮಂದಿ ಕೊರೊನಾಗೆ ಬಲಿಯಾಗುವ ಮೂಲಕ ಈವರೆಗೆ ದೇಶದಲ್ಲಿ ಸುಮಾರು 5,15,877 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಸಕ್ರಿಯ ಸೋಂಕಿತರ ಸಂಖ್ಯೆ 36,168 ಮಾತ್ರ ಇದ್ದು, ಪಾಸಿಟಿವಿಟಿ ರೇಟ್​ ಶೇ.0.47 ರಷ್ಟು ಇದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ವ್ಯಾಕ್ಸಿನೇಷನ್​: ದೇಶದಲ್ಲಿ ಈವರೆಗೆ ಸುಮಾರು 1,79,91,57,486 ಕೋಟಿ ಡೋಸ್​ ವ್ಯಾಕ್ಸಿನೇಷನ್ ನೀಡಲಾಗಿದೆ.

Last Updated : Mar 14, 2022, 11:29 AM IST

ABOUT THE AUTHOR

...view details