ನವದೆಹಲಿ:ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,51,209 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಗುರುವಾರಕ್ಕಿಂತ ಕೊಂಚ ಕಡಿಮೆ ಸೋಂಕಿತರು ಕಂಡುಬಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 627 ಮಂದಿ ಕೋವಿಡ್ಗೆ ಬಲಿಯಾಗಿದ್ದು, 3,47,443 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ದಿನವೊಂದರಲ್ಲಿ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವವರ ಪೈಕಿ ಸುಮಾರು ಶೇಕಡಾ 15.88ರಷ್ಟು ಮಂದಿಯಲ್ಲಿ ಸೋಂಕು ಕಂಡುಬರುತ್ತಿದೆ.