ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 25,920 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ, ಪಾಸಿಟಿವಿಟಿ ದರ ಶೇ 2 - india new covid cases
ಭಾರತದಲ್ಲಿ ಕೊರೊನಾ ಸೋಂಕಿನ ಹಾವಳಿ ಕಡಿಮೆಯಾಗಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ ಮಹಾಮಾರಿ ಸೋಂಕಿಗೆ 492 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ದೈನಂದಿನ ಪಾಸಿಟಿವಿಟಿ ದರ 2.07% ಇದೆ.
COVID cases
ಕಳೆದೊಂದು ದಿನದಲ್ಲಿ ದೇಶದಲ್ಲಿ ಮಹಾಮಾರಿ ಸೋಂಕಿಗೆ 492 ಮಂದಿ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ 2,92,092 ಸಕ್ರಿಯ ಪ್ರಕರಣಗಳಿವೆ. ನಿನ್ನೆಗಿಂತ 4,837 ಕಡಿಮೆ ಹೊಸ ಸೋಂಕಿತ ಪ್ರಕರಣಗಳು ಇಂದು ವರದಿಯಾಗಿದ್ದು, 66,254 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,19,77,238ಕ್ಕೆ ಏರಿಕೆಯಾಗಿದೆ.
ವ್ಯಾಕ್ಸಿನೇಷನ್ ವಿವರ: ಈವರೆಗೆ ದೇಶದಲ್ಲಿ ಸುಮಾರು 1,74,64,99,461 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.