ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಇದೇ ಮೊದಲ ಬಾರಿಗೆ 4,529 ಮಂದಿ ಕೋವಿಡ್‌ಗೆ ಬಲಿ - coronavirus update live

ಕಳೆದ 24 ಗಂಟೆಯಲ್ಲಿ ದಾಖಲಾದ ಪ್ರಕರಣಗಳೊಂದಿಗೆ ದೇಶದಲ್ಲಿ ಈವರೆಗಿನ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 2,54,96,330ಕ್ಕೆ ಏರಿದೆ. ಒಂದೇ ದಿನ 3.89 ಲಕ್ಷ ಜನ ಗುಣಮುಖರಾಗಿದ್ದಾರೆ.

India reports 2,67,334 new  COVID19 cases
ಕಳೆದ 24 ಗಂಟೆಗಳಲ್ಲಿ 2.67 ಲಕ್ಷಕ್ಕೂ ಅಧಿಕ ಜನರಿಗೆ ಕೋವಿಡ್​ ದೃಢ

By

Published : May 19, 2021, 10:49 AM IST

ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 2,67,334 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 4529 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 3,89,851 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗಿನ ಅಂಕಿಅಂಶ:

ದೇಶದಲ್ಲಿ ಈವರೆಗೆ ಒಟ್ಟು 2,54,96,330 ಕೊರೊನಾ ಪ್ರಕರಣಗಳು ದಾಖಲಾಗಿವೆ. 2,19,86,363 ಸೋಂಕಿತರು ಗುಣಮುಖರಾಗಿದ್ದಾರೆ. 2,83,248 ಸುಮಾರು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 32,26,719 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

ಕೋವಿಡ್ ಪರೀಕ್ಷೆ:

ಮೇ 18 ರವರೆಗೆ 32,03,01,177 ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ. ನಿನ್ನೆ ಒಂದೇ ದಿನ 20,08,296 ಸ್ಯಾಂಪಲ್ಸ್​ ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.

ಲಸಿಕೆ ವಿತರಣೆ:

ದೇಶಾದ್ಯಂತ ಇಲ್ಲಿಯವರೆಗೆ 18,58,09,302 ಜನರಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ

ABOUT THE AUTHOR

...view details