ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಮತ್ತೆ ಇಳಿಕೆಯತ್ತ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 30,941 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಈ ಅವಧಿಯಲ್ಲಿ 350 ಜನ ವೈರಸ್‌ಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟಾರೆ 4,38,560 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದೊಂದು ದಿನದಲ್ಲಿ ಸೋಂಕಿನಿಂದ 36,27 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಚೇತರಿಸಿಕೊಂಡವರ ಸಂಖ್ಯೆ 3,19,59,680 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,70,640ಕ್ಕೆ ಏರಿಕೆಯಾಗಿದೆ.